(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ. 01. ಅಕ್ಟೋಬರ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಹಣದುಬ್ಬರದ ಆಘಾತ ಎದುರಾಗಿದ್ದು, ಎಲ್.ಪಿಜಿ ಸಿಲಿಂಡರ್ ಬೆಲೆಯು ಇಂದಿನಿಂದ(ಅ. 01) ಹೆಚ್ಚಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ್ದು, ಇದರಡಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯು 209 ರೂ. ಏರಿಕೆ ಕಂಡಿದೆ. 209 ರೂಪಾಯಿಗಳ ಹೆಚ್ಚಳದ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,731.50 ರೂ ಆಗಲಿದೆ ಎಂದು ಹೇಳಲಾಗಿದೆ.
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
