ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಬೆಂಕಿಗಾಹುತಿ- ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಚಲಿಸುತ್ತಿದ್ದ ಇಲೆಕ್ಟ್ರಿಕ್​ ಕಾರಿನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಶನಿವಾರದಂದು ಜೆ.ಪಿ ನಗರ ಸಮೀಪ ವರದಿಯಾಗಿದೆ.

ಜೆ.ಪಿ ನಗರದ ಬಳಿ ಚಾಲಕ ಮತ್ತು ಆತನ ಸ್ನೇಹಿತ ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಇಂಜಿನ್​ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಹಾಗೂ ಆತನ ಸ್ನೇಹಿತ ಕಾರಿನಿಂದ ಇಳಿದಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Also Read  ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

error: Content is protected !!
Scroll to Top