(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಚಲಿಸುತ್ತಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಶನಿವಾರದಂದು ಜೆ.ಪಿ ನಗರ ಸಮೀಪ ವರದಿಯಾಗಿದೆ.

ಜೆ.ಪಿ ನಗರದ ಬಳಿ ಚಾಲಕ ಮತ್ತು ಆತನ ಸ್ನೇಹಿತ ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಇಂಜಿನ್ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಹಾಗೂ ಆತನ ಸ್ನೇಹಿತ ಕಾರಿನಿಂದ ಇಳಿದಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.














