ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ್ ಸೇವಾದಳದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಅಕ್ಟೋಬರ್ 2ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ಟೌನ್‍ಹಾಲ್ ಬಳಿಯಿರುವ ರಾಜಾಜೀ ಪಾರ್ಕ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವರು. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು

error: Content is protected !!
Scroll to Top