ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ, . 02. ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಮುಂಜಾನೆ 5 ಗಂಟೆಯ ವೇಳೆಗೆ ಪರ್ಲೊಟ್ಟು ಎಂಬಲ್ಲಿ ಕೆರೆಯೊಂದರ ಬಳಿ ಬೈಕ್, ಮೊಬೈಲ್ ಹಾಗೂ ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Also Read  ಮಂಗಳೂರು: ಸೆ. 20ರಂದು ವಿದ್ಯಾರ್ಥಿ ನಿಲಯಗಳ ಉದ್ಘಾಟನೆ

error: Content is protected !!
Scroll to Top