ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, 02. ಸಮಾಜದಲ್ಲಿ ಶಾಂತಿ ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಎಲ್ಲ ಮಾಹಿತಿ ತೆಗೆದುಕೊಂಡಿದ್ದೇನೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅಧಿಕಾರಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದರು. ಪ್ರಕರಣದ ತನಿಖೆಯನ್ನು ತನಿಖಾಧಿಕಾರಿಗಳು ಮಾಡುತ್ತಾರೆ. ಕಾನೂನು ಮೀರಿ ಹೋದವರ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Also Read  ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು

error: Content is protected !!
Scroll to Top