(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ.
ಉದ್ಯಮಿಗಳ ನಿವಾಸ, ಸಂಸ್ಥೆಗಳು, ಮನೆ ಹಾಗೂ ಕಛೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.
Also Read ಪಂಜ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ➤ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿ ಸಹಿತ ಪಿಕಪ್ ವಶಕ್ಕೆ