ಕೆಮ್ಮಾರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 04. ಇಲ್ಲಿನ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಎಮ್, ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಹಾಗೂ ಉಪಾಧ್ಯಕ್ಷೆ ಶ್ರೀಮತಿ ತೇಜಾವತಿ, ಶಾಲಾಭಿವೃಧ್ದಿ ಸಮಿತಿ ಸದಸ್ಯರು, ಮತ್ತು ಅಧ್ಯಾಪಕ ವೃಂದದವರು ಸೇರಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯ ಗುರುಗಳು ಮಹಾತ್ಮಾಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ, ಹಾಡು, ಭಾಷಣ ಮಾಡುವ ಮೂಲಕ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ ಬಡಿಲ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃಧ್ದಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ, ಶರೀಫ್ ಯು.ಟಿ, ಅಬ್ಬಾಸ್, ನಝೀರ್ ಕುವೈತ್, ಅಧ್ಯಾಪಕ ವೃಂದದವರು, ಅಕ್ಷರ ದಾಸೋಹ ಸಿಬ್ಬಂದಿಗಳು, ಪೋಷಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶ್ರೀ ವೆಂಕಟ್ರಮಣ ಭಟ್ ಧನ್ಯವಾದಗೈದರು. ಕೊನೆಯಲ್ಲಿ ಪದ್ಮನಾಭ ಶೆಟ್ಟಿ ನಡುಬಡಿಲ ಇವರ ವತಿಯಿಂದ ಸಿಹಿತಿಂಡಿಗಳನ್ನು ವಿತರಿಸಲಾಯಿತು.

Also Read  ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

error: Content is protected !!
Scroll to Top