ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕರ್ತವ್ಯದಲ್ಲಿದ್ದಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೆಡ್ ಕಾನ್ಸ್​ಟೇಬಲ್ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ವಿಜಯಪುರದ ಸೋಮನಗೌಡ ಚೌಧರಿ (32) ಎಂದು ಗುರುತಿಸಲಾಗದೆ. 2016ರ ಬ್ಯಾಚ್‌ನ ಸೋಮನಗೌಡ ಚೌಧರಿ ಅವರು, ಮಂಗಳೂರು ಸಿಎಆ‌ರ್ ಕಾನ್ಸ್​ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದರು. ಬಳಿಕ ಹೆಡ್‌ ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದು, ಸದ್ಯ ನಗರದ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್​ಪೆಕ್ಟರ್‌ ನ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು. ಮಂಗಳವಾರದಂದು ಕರ್ತವ್ಯದಲ್ಲಿದ್ದ ಸೋಮನಗೌಡ ಅವರು ನಗರದ ಮಳಿಗೆಯೊಂದಕ್ಕೆ ತೆರಳಿದ್ದ ವೇಳೆ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

Also Read  ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್, ಪೊಲೀಸ್ ಅಧಿಕಾರಿಗಳು ಹಾಗೂ ಸಹೋದ್ಯೋಗಿ ಸಿಬ್ಬಂದಿ ವರ್ಗವು ಸೋಮನಗೌಡ ಅವರ ಮೃತದೇಹಕ್ಕೆ ಅಂತಿಮ ಗೌರವ ಸಲ್ಲಿಸಿ, ಕುಟುಂಬದವರಿಗೆ ಹಸ್ತಾಂತರಿಸಿ, ಬಳಿಕ ಮೃತದೇಹವನ್ನು ತವರು ಜಿಲ್ಲೆಯಾದ ವಿಜಯಪುರಕ್ಕೆ ಕಳುಹಿಸಿ ಕೊಡಲಾಗಿದೆ.

error: Content is protected !!
Scroll to Top