ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ- ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಅ. 04. ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಿಂದ ವರದಿಯಾಗಿದೆ.

ಮೃತ ವಿದ್ಯಾರ್ಥಿಯನ್ನು 9 ನೇ ತರಗತಿಯ ರಾಹುಲ್ ಕೋಲಕಾರ ಎಂದು ಗುರುತಿಸಲಾಗಿದೆ. ಈತ ಅರ್ಧ ವಾರ್ಷಿಕ ಪರೀಕ್ಷೆ ಬರೆಯಲು ಶಾಲೆಗೆ ಹೋದ ವೇಳೆ ಈ ದುರ್ಘಟನೆ ಸಂಭವಿಸಿದೆ. ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಾಗ ಶಿಕ್ಷಕರು ಹಾಗೂ ಇತರ ಶಾಲಾ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದ ಎನ್ನಲಾಗಿದೆ.

Also Read  ರಾಜ್ಯದಲ್ಲಿ ವಿದ್ಯುತ್ ಬೆಲೆಯೇರಿಕೆಗೆ ಮುಂದಾದ ವಿದ್ಯುತ್ ಸರಬರಾಜು ಕಂಪನಿ ➤ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ‌‌ ತತ್ತರಿಸಿದ್ದ ಜನತೆಗೆ ಮತ್ತೊಂದು ಬಿಗ್ ಶಾಕ್..!

error: Content is protected !!
Scroll to Top