(ನ್ಯೂಸ್ ಕಡಬ) newskadaba.com ಕಡಬ, ಅ. 04. ಸೈಂಟ್ ಜೋಕಿಮ್ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಉದ್ಘಾಟಿಸಿ, ಬಳಿಕ ಗಾಂಧೀಜಿಯವರ ಮಹತ್ವದ ಕುರಿತು ಮಕ್ಕಳಿಗೆ ತಿಳಿಸಲಾಯಿತು.
ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು ಹಾಗೂ ಶಾಲೆಯ ಸುತ್ತಮುತ್ತ ಸ್ವಚ್ಛತೆಯನ್ನು ಮಾಡಿದರು. ಸೈಂಟ್ ಜೋಕಿಮ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಹಾಗೂ ಸೈಂಟ್ ಜೋಕಿಮ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಲತಾ ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದ ಹಾಗೂ ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು 6ನೇ ತರಗತಿಯ ಫಾತಿಮಾತ್ ಸನಾ ಹಾಗೂ ಹರೀಶ್ ಗೌಡ ಸ್ವಾಗತಿಸಿ 4ನೇ ತರಗತಿಯ ಸುಹೈಮ ವಂದಿಸಿದರು.