ಬೆಳ್ಳಾರೆ: ಜ್ಯೂಸ್ ಮಾಡುವ ಹಣ್ಣೆಂದು ಭಾವಿಸಿ ಯಾವುದೋ ಹಣ್ಣಿನ ಜ್ಯೂಸ್ ಸೇವನೆ – ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 04. ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಲ್ ಹಣ್ಣು ಎಂದು ಭಾವಿಸಿ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ನಡೆದಿದೆ.


ಮೃತ ಮಹಿಳೆಯನ್ನು ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಯಾವುದೋ ಒಂದು ಹಣ್ಣನ್ನು ಸೇವಿಸಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು. ಪರಿಣಾಮ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರ ಪೈಕಿ ಲೀಲಾವತಿಯವರಿಗೆ ವಾಂತಿ ಹಾಗೂ ಭೇದಿ ಆರಂಭವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಸೌಖ್ಯ ತೀವ್ರಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Also Read  ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

error: Content is protected !!