ಕಾವೇರಿ ನದಿ ನೀರು ವಿವಾದ – ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್.ಎಸ್ ವರೆಗೆ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದೆಲ್ಲೆಡೆ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ(ಅ. 05) ಬೆಂಗಳೂರಿನಿಂದ ಕೆ ಆರ್ ಎಸ್ ವರೆಗೆ ವಾಹನಗಳಲ್ಲಿ ಭಾರೀ ಮೆರವಣಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ತಮಿಳುನಾಡು ಸರ್ಕಾರದ ವಿರುದ್ಧ ಕನ್ನಡ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ ಐದರಂದು ಬೆಳಗ್ಗೆ 11 ಗಂಟೆಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ನಿಂದ ಕೆ ಆರ್ ಎಸ್ ವರೆಗೆ ಭಾರೀ ವಾಹನಗಳಲ್ಲಿ ಮೆರವಣಿಗೆ ಏರ್ಪಡಿಸಲಾಗಿದೆ. ಮೆರವಣಿಗೆಯಲ್ಲಿ ಕನ್ನಡ ಒಕ್ಕೂಟದ ಮುಖಂಡರಾದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘಟನೆ ಅಧ್ಯಕ್ಷ ಸಾ.ರಾ ಗೋವಿಂದು, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಹೆಚ್ ವಿ ಗಿರೀಶ್ ಗೌಡ ಸೇರಿದಂತೆ ಇತರೆ ಕನ್ನಡಪರ ಸಂಘಟನೆಗಳ ಮುಖಂಡರು, ಹೋರಾಟಗಾರರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Also Read  ಅನ್ಯಕೋಮಿನ ಜೋಡಿಯ ಮದುವೆ- ಪ್ರಕರಣ ತಡವಾಗಿ ಬೆಳಕಿಗೆ ➤ ಹಿಂದೂ ಸಂಘಟನೆಗಳಿಂದ ಆಕ್ರೋಶ...!!

error: Content is protected !!
Scroll to Top