ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಮಂಗಳೂರು ವಿಶ್ವವಿದ್ಯಾನಿಲಯ, ಕಾಲೇಜು ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜುಗಳ ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ಒಂದು ದಿನದ ರೋವರಿಂಗ್ ಮತ್ತು ರೇಂಜರಿಂಗ್ ಮಾಹಿತಿ ಶಿಬಿರವನ್ನು ಅ. 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಲಾಲ್ ಬಾಗ್ ನಲ್ಲಿರುವ ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರೊ. ಜಯರಾಜ್ ಅಮಿನ್ ಉದ್ಘಾಟಿಸುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ. ರಾಮೇಗೌಡ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Also Read  ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು

error: Content is protected !!
Scroll to Top