(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. 2023-24 ನೇ ಸಾಲಿನ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ,( ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ, (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಶೈಕ್ಷಣಿಕ ಶಾಲಾ ಯೋಜನೆ, ಮರಾಠ ಮಿಲಿಟ್ರಿ ಹೋಟೆಲ್ ಯೋಜನೆ ( ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ, ಈ ಯೋಜನೆ ಮರಾಠ ಸಮುದಾಯದ ಯುವ ಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಮೂಕಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಿಂದ ಅಲ್ಪಾವಧಿ ಕೋರ್ಸ್‍ಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸೇವಾ ಸಿಂಧು, ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ವನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ https://kmcdc.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿದಾರರು ಸರ್ಕಾರದ ಹಾಗೂ ನಿಗಮದ ನಿರ್ದೇಶಕರ ಮಂಡಳಿಯ ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ ನಿಬಂಧನೆಗಳನ್ನು ಹೊಂದಿದವರಾಗಬೇಕು. ಅರ್ಜಿಯನ್ನು ಅ.30 ರೊಳಗೆ ಸಲ್ಲಿಸಬಹುದಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ https://kmcdc.karnataka.gov.in ಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು ತಿಳಿಯಬಹುದು. ದೂರವಾಣಿ ಸಂಖ್ಯೆ 0824-2456544, 9148023035, 8618146685 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಮಾರಾಟ ಸಮುದಾಯಗಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.