(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. 2023-24ನೇ ಸಾಲಿನ ಕರ್ನಾಟಕ ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ (ಗಂಗಾ ಕಲ್ಯಾಣ ನೀರಾವರಿ), ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ ( ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ) ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅ. 30 ರೊಳಗೆ ಅರ್ಜಿ ಸಲ್ಲಿಸಬಹುದು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ಕಚೇರೆಗೆ ಭೇಟಿ ನೀಡಬಹುದಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2456544, 9900012351, 9591310626 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.