ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ



(ನ್ಯೂಸ್ ಕಡಬ) newskadaba.com ವಿಟ್ಲ, ಅ. 04. ಮಾರ್ಬಲ್‌ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ.







ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್ ಲೋಡ್ ಗಾಗಿ ರಿವರ್ಸ್ ತೆಗೆಯುವ ಸಂದರ್ಭ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.






error: Content is protected !!
Scroll to Top