(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬೆಂಗಳೂರು ನಗರವು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದ್ದು, ಹಾಗೂ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 25ರಂದು ಕೊನೆಯ ದಿನವಾಗಿದ್ದು, ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್ bmrc.co.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಹುದ್ದೆಯ ಮಾಹಿತಿ- ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್ ಎಂಜಿನಿಯರ್ ಹುದ್ದೆ ಖಾಲಿ ಇದ್ದು, ಒಟ್ಟು 8 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಿಇ/ಬಿ.ಟೆಕ್, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. ಆಯ್ಕೆಯಾದವರಿಗೆ ವೇತನ ಮಾಸಿಕ 1,40,000- 1,65,000 ರೂಪಾಯಿವರೆಗೆ ಇರಲಿದೆ ಎಂದು ಮಾಧ್ಯಮವೊಂದು ವರದಿಯಲ್ಲಿ ತಿಳಿಸಿದೆ.
ಹುದ್ದೆಗಳ ವಿವರ- ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 1, ಅಡಿಶನಲ್ ಚೀಫ್ ಎಂಜಿನಿಯರ್ (ಟ್ರಾಕ್ಷನ್ & RSS)-2, ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್ ) – 1, ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ) -1, ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS) – 1, ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್) – 1 ಹಾಗೂ ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್) – 1 ಹೀಗೆ ಮೆಟ್ರೋದಲ್ಲಿ ವಿಭಾಗವಾರು 8 ಖಾಲಿ ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.