(ನ್ಯೂಸ್ ಕಡಬ) newskadaba.com ಮಂಗಳೂರು, ಅ. 06. ನಗರದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಡಾ|| ಅಕ್ಷಯ್ ಕುಮಾರ್ ಎಂ.ಹಾಕೆ, ಐಪಿಎಸ್ ಮಾನ್ಯ ಉಪ ಮಹಾ ಸಮಾದೇಷ್ಟರು, ಗೃಹರಕ್ಷಕದಳ ಹಾಗೂ ಉಪ ನಿರ್ದೇಶಕರು, ಪೌರರಕ್ಷಣೆ, ಕರ್ನಾಟಕ ರಾಜ್ಯ ಬೆಂಗಳೂರು ಇವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು ಪರಿಶೀಲಿಸಿದ ಅವರು, ಕಾಲ ಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ಇತರೆ ಇಲಾಖೆಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದರು. ಗೃಹರಕ್ಷಕರ ಕುಂದು ಕೊರತೆಗಳ ಬಗ್ಗೆ ವಿಚಾರಿಸುವಂತೆ ಸಮಾದೇಷ್ಟರಿಗೆ ಸೂಚನೆ ನೀಡಿದರು. ದ.ಕ. ಜಿಲ್ಲೆಯಲ್ಲಿ ಪೌರ ರಕ್ಷಣಾ ಪಡೆಗಳನ್ನು ಇನ್ನಷ್ಟು ಮುನ್ನೆಲೆಗೆ ತರಲು ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ಸಮಾದೇಷ್ಟರಿಗೆ ಆದೇಶ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆ ಚೀಫ್‍ವಾರ್ಡನ್ ಡಾ.ಮುರಲೀ ಮೋಹನ್ ಚೂಂತಾರು, ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಹಾಗೂ ಗೃಹರಕ್ಷಕರು ಉಪಸ್ಥಿತರಿದ್ದರು.