ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ.


ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ತಪಾಸಣೆ ನಡೆಸಿದಾಗ 61,42,500 ರೂ. ಮೌಲ್ಯದ 1,050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಸಾಗಿಸಲು ಯತ್ನಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Also Read  ವಿಟ್ಲ: ಸೇತುವೆಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು- ಯುವಕರ ಸಾಹಸಕ್ಕೆ ಸ್ಥಳೀಯರ ಪ್ರಶಂಸೆ

error: Content is protected !!
Scroll to Top