ಅರಣ್ಯ ಪ್ರದೇಶದ 1 ಕಿ.ಮೀ. ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ- ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಕೆ ಮಾಡಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವಂತಹ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುಮತಿ ಇರಲಿಲ್ಲ. ಈ ವ್ಯಾಪ್ತಿಯಲ್ಲಿರುವ ಖಾಸಗಿ ಭೂಮಿಯಲ್ಲಿ ಫಾರಂ ಹೌಸ್‌, ರೆಸಾರ್ಟ್‌, ಸಾ ಮಿಲ್‌ ಹಾಗೂ ಪವನ ವಿದ್ಯುತ್‌ ಘಟಕಗಳನ್ನು ನಿರ್ಮಾಣ ಮಾಡಬಹುದು. ಅದಕ್ಕೆ ಅನುಮತಿ ದೊರೆಯಲಿದೆ ಎಂದಿದ್ದಾರೆ. ರಾಜ್ಯದಲ್ಲಿ ಸುಮಾರು 35 ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪೈಕಿ 29 ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಲು ಸಹಮತ ವ್ಯಕ್ತವಾಗಿತ್ತು. ನಾಗರಹೊಳೆ ಸೇರಿ ಇನ್ನೂ 6 ಪ್ರದೇಶಗಳಲ್ಲಿ ಈ ನಿಯಮವನ್ನು ಸಡಿಲಿಸುವ ಕುರಿತು ಸಹಮತ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.

Also Read  ಪ್ರಾಕೃತಿಕ ವಿಕೋಪದ ಸಂದರ್ಭ ಅತ್ಯುತ್ತಮ ಕಾರ್ಯದಕ್ಷತೆ ➤ ಗೃಹರಕ್ಷಕದಳದ ಸೆಕ್ಷನ್ ಲೀಡರ್ ದಿನೇಶ್ ಅವರಿಗೆ ಕಂಚಿನ ಪದಕ

error: Content is protected !!
Scroll to Top