ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು..

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಇಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 100 ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 2ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ನೂರು ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಸಂಬಂಧ ಕೆಇಎ ಅಧಿಕೃತವಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅ. 04ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹುದ್ದೆಗಳ ವಿವರ- ಒಟ್ಟು 100 ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಈ ಪೈಕಿ 92 ಉಳಿಕೆ ಮೂಲ ವೃಂದಕ್ಕೆ ಹಾಗೂ 8 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಮೀಸಲಿಡಲಾಗಿದೆ. ಡಿಪ್ಲೊಮಾ ನರ್ಸಿಂಗ್ / ಬಿಎಸ್ಸಿ ನರ್ಸಿಂಗ್ ಉತ್ತೀರ್ಣರಾಗಿ, ನರ್ಸಿಂಗ್ ಕೌನ್ಸಿಲ್‌ನಲ್ಲಿ ರಿಜಿಸ್ಟ್ರೇಷನ್‌ ಪಡೆದಿರಬೇಕು. ಕನಿಷ್ಟ 18 ವರ್ಷ, ಗರಿಷ್ಠ 35 ವಯೋಮಿತಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 2ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದವರಿಗೆ 33,450 ರೂ. ನಿಂದ 62,600 ರೂ. ವರೆಗೆ ಮಾಸಿಕ ವೇತನ ನೀಡಲಾಗುತ್ತದೆ. ಇನ್ನು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್​ 4ರಿಂದ ಅರ್ಜಿ ಸಲ್ಲಿಕೆ ಅರಂಭವಾಗಿದ್ದು, ನವೆಂಬರ್​ 2 ಕೊನೆಯ ದಿನ. ಅರ್ಜಿ ಶುಲ್ಕ ಪಾವತಿಗೆ ನ. 04 ಕಡೆ ದಿನವಾಗಿದೆ. ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ 750, ಪರಿಶಿಷ್ಟ ಜಾತಿ ಹಾಗೂ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ ಪಾವತಿ ಮಾಡಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು kea.kar.nic.in ಭೇಟಿ ನೀಡಬಹುದಾಗಿದೆ.

Also Read  ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

error: Content is protected !!
Scroll to Top