ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಕೋಲಾರ, ಅ. 13. ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕೋಲಾರ ಜಿಲ್ಲೆಯ ಮಾಲೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.


ಬೆಂಗಳೂರು-ಮಾರಿಕುಪ್ಪಂ ರೈಲು, ನಿಲ್ದಾಣಕ್ಕೆ ಬರುತ್ತಿದಂತೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಎದುರಾಗಿತ್ತು.

2 ನಿಮಿಷಗಳ ಕಾಲ ಕಾಣಿಸಿಕೊಂಡಿದ್ದು, ರೈಲಿನಲ್ಲಿ 500 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ ನಂದಿಸಿದ ಬಳಿಕ ಮತ್ತೆ ಸಂಚಾರ ಆರಂಭವಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Also Read  ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ➤ ನಾಲ್ವರ ವಿರುದ್ದ ಕೇಸು ದಾಖಲು

error: Content is protected !!
Scroll to Top