ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು – News Kadaba

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 13. ಕಾರು ಢಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.


ಮೃತ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಪಾವನ, ಗುರುವಾರದಂದು ಸಂಜೆ ಕೆಲಸ ಬಿಟ್ಟು ಮಂಗಳೂರಿನಿಂದ ಬಸ್ ಮೂಲಕ ಊರಿಗೆ ತೆರಳಿದ್ದಳು. ಯುವತಿ ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದಾಳೆ. ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top