ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು – News Kadaba

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ.


ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ ಹಾಗೂ ಅಭಯ್ ನಾರಾಯಣ್ ಎಂದು ಗುರುತಿಸಲಾಗಿದೆ.

ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳಾದ ಇವರು ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಇದೀಗ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ.ಹಾಗೂ ಪೋಲಿಸ್ ಉಪನಿರೀಕ್ಷಕರಾದ ಹರೀಶ್ ಎಂ.ಆರ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯಕುಮಾರ್ ಮಾಹಿತಿ ಸಂಗ್ರಹಿಸಿ ಉಡುಪಿಯಲ್ಲಿ ವಶಕ್ಕೆ ಪಡೆದು, ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Scroll to Top