(ನ್ಯೂಸ್ ಕಡಬ) newskadaba.com ಕೊಪ್ಪಳ, ಅ. 14. ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ಒಂದರಲ್ಲಿ ನಡೆದಿದೆ.
ಘಟನೆಯ ಸಂಬಂಧ ನವೀನ್, ಸಾಕೀವ್ ಹಾಗೂ ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಯುವತಿಯು ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆತಂದ ಕಿರಾತಕರು, ಆಕೆಯನ್ನು ಆಟೋದಲ್ಲಿ ಕಿಡ್ನ್ಯಾಪ್ ಮಾಡಿ, ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಕೆಫೆ ಹೋಟೆಲ್ ಗೆ ಕರೆದೊಯ್ದು ಬಿಯರ್ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.