ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ದುರ್ಮರಣ

(ನ್ಯೂಸ್ ಕಡಬ) newskadaba.com ರಾಮನಗರ, ಅ. 14. ಲಾರಿ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಶನಿವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ಓಮ್ನಿ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಪರಿಣಾಮ ಓಮ್ನಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಢಿಕ್ಕಿಯ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತವುಂಟಾದ ಹಿನ್ನಲೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top