ಅಗರಬತ್ತಿ ತಯಾರಿಕಾ ಪ್ರದೇಶಕ್ಕೆ ಬೆಂಕಿ ತಗುಲಿ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡ ಘಟನೆ ಮಾಸುವ ಬೆನ್ನಲ್ಲೇ ನಗರದಲ್ಲಿ ಇನ್ನೆರಡು ಅಗ್ನಿ ಅವಘಡಗಳು ಸಂಭವಿಸಿದ್ದು, ಓರ್ವ ವ್ಯಕ್ತಿ ಗಾಯಗೊಂಡ ಕುರಿತು ಪೈಪ್​ಲೈನ್ ರಸ್ತೆಯ ಚೋಳರಪಾಳ್ಯದ ಅಗರಬತ್ತಿ ಕಾರ್ಖಾನೆಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿದ್ದು, ಅಗ್ನಿ ಶಾಮಕದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಗಾಯಗೊಂಡವರನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರದೇಶದಲ್ಲಿ ಮನೆಗಳಲ್ಲೇ ಅಗರಬತ್ತಿ ತಯಾರಿಸಲಾಗುತ್ತಿದ್ದು ಏಕಾಏಕಿ ಬಡಂಕಿ ಕಾಣಿಸಿಕೊಂಡಿದ್ದರಿಂದ ರಾಸಾಯನಿಕಗಳಿಗೆ ಬೆಂಕಿ ತಗುಲಿ ರಸ್ತೆಗೂ ಬೆಂಕಿ ಆವರಿಸಿಕೊಂಡಿದೆ. ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಮನೆ ಮುಂದೆ ನಿಲ್ಲಿಸಿದ್ದ ಎಂಟು ಬೈಕ್​ಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. ವಿಜಯನಗರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Also Read  ಕರ್ಕಶ ಸೈಲೆನ್ಸರ್ ಮೇಲೆ ರೋಡ್ ರೋಲರ್ ಹರಿಸಿ ನಾಶ  ➤ ಎಸ್.ಪಿ ಮಿಥುನ್ ಕುಮಾರ್‌                          

error: Content is protected !!
Scroll to Top