ಪುತ್ತೂರು: ಈಜಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಎಂಬಾತರ ಮೃತದೇಹ ಸೋಮವಾರದಂದು ಮುಂಜಾನೆ ಪತ್ತೆಯಾಗಿದೆ.


ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ. ಈತ ಭಾನುವಾರದಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನಾಪತ್ತೆಯಾಗಿದ್ದನು. ಜೊತೆಗಿದ್ದ ಸ್ನೇಹಿತರು ತಕ್ಷಣವೇ ಮನೆಯವರಿಗೆ ಹಾಗೂ ಸ್ಥಳೀಯರಿಗೆ ವಿಷಯ ತಲುಪಿಸಿದ್ದರು. ಸ್ಥಳಕ್ಕೆ ಸ್ಥಳೀಯರು, ಮುಳುಗು ತಜ್ಞರು ಬಂದು ಹುಡುಕಾಟ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ಇಂದು ಬೆಳಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಸಮೀಪವೇ ತಸ್ಲೀಮ್ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

Also Read  ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ

error: Content is protected !!
Scroll to Top