ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 16. ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ನಾಪತ್ತೆಯಾಗಿರುವ ಕುರಿತು ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೇ ಎರಡು ಪವನಿನ ಇನ್ನೊಂದು ಚಿನ್ನದ ಸರವೂ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸರಕಾರ ದೇವಾಲಯಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದ್ದು, ಅಧಿಕಾರ ಸ್ವೀಕರಿಸಿದ ಅವರು ಅ. 15ರಂದು ಭಕ್ತಾದಿಗಳ ಸಮ್ಮುಖದಲ್ಲಿ ಮಹಜರು ನಡೆಸಿದಾಗ ಚಿನ್ನದ ಸರಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

Also Read  ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

error: Content is protected !!
Scroll to Top