(ನ್ಯೂಸ್ ಕಡಬ) newskadaba.com ಸುರತ್ಕಲ್, ಅ. 16. ವಾಟ್ಸಾಪ್ ಗ್ರೂಪ್ ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.
ಬಂಧಿತರನ್ನು ಸುರತ್ಕಲ್ ಕಟ್ಲ ನಿವಾಸಿ ಮೂಡ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ವ್ಯಾಪಾರ ಮಾಡುತ್ತಿದ್ದ ಪ್ರವೀಣ ಮತ್ತು ಚೊಕ್ಕಬೆಟ್ಟು ಕ್ರಾಸ್ ವಿಶಾಲ್ ಮಾರ್ಟ್ ಬಳಿಯ ನಿವಾಸಿ ಮೂಡ ಮಾರುಕಟ್ಟೆಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುನವ್ವರ್ ಎಂದು ಗುರುತಿಸಲಾಗಿದೆ. ಆರೋಪಿ ಪ್ರವೀಣ್ ಎಂಬಾತ ವಾಟ್ಸಾಪ್ ಗ್ರೂಪ್ ಗಳನ್ನು ಮಾಡಿಕೊಂಡು ಅದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಕುರಿತ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.