ಬಂಟ್ವಾಳ: ಅಪರೂಪದ ಉಡ’ವನ್ನು ಬೇಟೆಯಾಡಿ ಫೋಟೋಗೆ ಪೋಸ್‌ – ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 16. ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡ’ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದರೊಂದಿಗೆ ಪೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ಬಂಟ್ವಾಳದ ವಗ್ಗದಲ್ಲಿ ನಡೆದಿದೆ.

ಉಡ’ವನ್ನು ಕೊಂದ ವ್ಯಕ್ತಿಯನ್ನು ವಗ್ಗ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ವನ್ಯ ಜೀವಿ ಸಂರಕ್ಷಣ ಕಾಯಿದೆ 1972 ಅನ್ವಯ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅ. 11 ರಂದು ಘಟನೆ ಬೆಳಕಿಗೆ ಬಂದಿದ್ದು, ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ ಅದನ್ನು ತೆಗೆದುಕೊಂಡು ವಿಜೃಂಭಿಸುತ್ತಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು ಜೊತೆಗೆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದ ಎನ್ನಲಾಗಿದೆ. ಇತ್ತ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Also Read  ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ

error: Content is protected !!
Scroll to Top