ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಜಿಲ್ಲಾ ವ್ಯಾಪ್ತಿಯ 17 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನವೆಂಬರ್ 6ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಮುಲ್ಕಿ ತಾಲೂಕಿನ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್, ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಇರುವತ್ತೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತ್, ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೆಯ್ಯೂರು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್, ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮ ಪಂಚಾಯತ್, ಮಂಗಳೂರು ತಾಲೂಕಿನ ಬಡಗ ಎಡಪದವು ಹಾಗೂ ಮಲ್ಲೂರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮಣಿ ನಾಲ್ಕೂರು, ಮಾಣಿಲ, ಮಾಣಿ ಹಾಗೂ ಸಾಲೆತ್ತೂರು ಗ್ರಾಮ ಪಂಚಾಯತ್, ಮೂಡಬಿದ್ರೆ ತಾಲೂಕಿನ ವಾಲ್ಪಡಿ ಗ್ರಾಮಪಂಚಾಯತ್, ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮಪಂಚಾಯತ್ ಹಾಗೂ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮಪಂಚಾಯತ್‍ಗಳಲ್ಲಿ ಹುದ್ದೆ ಖಾಲಿ ಇದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ: www.zpdk.karnataka.gov.inಸಂಪರ್ಕಿಸುವಂತೆ ಗ್ರಾಮ ಪಂಚಾಯತ್ ಗ್ರಂಥಾಲಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

error: Content is protected !!
Scroll to Top