ವಿವಿಧ ಬೇಡಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರಿಂದ ಅಲ್ಲಲ್ಲಿ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಮುಂದೆ ಹಾಗೂ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕು ಕಚೇರಿಯೆದುರು ಶುಕ್ರವಾರದಂದು ಮುಷ್ಕರ ನಡೆಯಿತು.

ಮುಷ್ಕರವನ್ನು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ‌ ಉದ್ಘಾಟಿಸಿದರು. ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್, ಮಾಜಿ ಕಾರ್ಪೊರೇಟರ್ ಜಯಂತಿ ಬಿ.ಶೆಟ್ಟಿ ಮಾತನಾಡಿದರು. ಬಿಸಿಯೂಟ ನೌಕರರಿಗೆ 5 ಸಾವಿರ ರೂ. ವೇತನ ನೀಡಬೇಕು, ಕನಿಷ್ಠ ಕೂಲಿ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.

Also Read  ಬಂಟ್ವಾಳ: ಮುಸಲ್ಮಾನರಲ್ಲಿ ಮಾತನಾಡಬಾರದೆಂದು ಮನೆಗೆ ನುಗ್ಗಿ ದಾಂಧಲೆ ► ಆರೋಪಿಗಳಿಬ್ಬರ ಬಂಧನ, ಇನ್ನಿಬ್ಬರು ಪರಾರಿ

error: Content is protected !!
Scroll to Top