ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17.  2023-24ನೇ ಸಾಲಿನ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ. 5,000 ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000 ದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ.

ಜಾನುವಾರು ಮಾಲೀಕರು ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಜಾನುವಾರುವಿನ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಿಸಿದ ನಂತರವೇ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಪಶು ಸಖಿಯರು ಮೃತಪಟ್ಟ ಜಾನುವಾರುವಿನ ಮಾಲೀಕರಿಗೆ ಈ ಸೌಲಭ್ಯವನ್ನು ಪಡೆದುಕೊಳ್ಳಲು ಅನುಕೂಲ ಮಾಡಿಕೊಡಬೇಕು. ಹೆಚ್ಚಿನ ಮಾಹಿತಿಗೆ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ಮಂಗಳೂರು-9243306956, ಬಂಟ್ವಾಳ-9481445365, ಪುತ್ತೂರು-9448129708 ಬೆಳ್ತಂಗಡಿ- 9448533922, ಕಡಬ- 9483922594, ಮೂಡಬಿದಿರೆ-8494897408, ಸುಳ್ಯ-9844995078, ಉಳ್ಳಾಲ-9019198507, ಮುಲ್ಕಿ-8971024282 ಅವರನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ರಾಷ್ಟ್ರೀಯ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಇಂದಿನಿಂದ ಆರಂಭ (IDCF)

error: Content is protected !!
Scroll to Top