(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಕರ್ನಾಟಕ ನೈರುತ್ಯ ಪದವೀಧರ/ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳು 2023ರ ಸೆಪ್ಟೆಂಬರ್ 30ರಂದು ಪ್ರಕಟಿಸಲಾದ ಸೂಚನೆಯಲ್ಲಿ ಸಂಬಂಧಿಸಿದ ಪದವೀಧರ/ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ನೋಂದಣಿ ನಿಯಮಗಳು 1960ಕ್ಕೆ ಸಂಬಂಧಿಸಿದಂತೆ ಎಲ್ಲಾ ಅರ್ಹರಿರುವ ವ್ಯಕ್ತಿಗಳು ನಮೂನೆ 18 ಮತ್ತು ನಮೂನೆ 19ರಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6ರೊಳಗೆ ಅಥವಾ ಅದಕ್ಕೂ ಮುಂಚೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್ ವಿಳಾಸ: www.ceokarnataka.kar.nic.in ನೋಡಬಹುದು ಎಂದು ಅಪರ ಜಿಲ್ಲಾದಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.