ಕಡಬ: ಮಳೆ ಬರುತ್ತಿದ್ದ ಹಿನ್ನೆಲೆ – ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಡಬ, ಅ.29. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Scroll to Top