ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು, ನ.07. ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ(24) ಅವರನ್ನು ಪುತ್ತೂರಿನ ನೆಹರೂ ನಗರದಲ್ಲಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ತಡರಾತ್ರಿ ನೆಹರೂ ನಗರಕ್ಕೆ ಕರೆಸಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೃತ್ಯ ನಡೆದ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Also Read  ದೀಪಕ್ ರಾವ್ ಕೊಲೆ‌ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ‌ ಬಂಧನ

error: Content is protected !!
Scroll to Top