ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ನ.14. ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದ ಪರಿಣಾಮ ಆಕೆ ಐದು ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ, ಅಪ್ರಾಪ್ತ ಬಾಲಕಿಯ ಮೇಲೆ ಕೇಶವ ಎಂಬಾತ ಅತ್ಯಾಚಾರಗೈದಿದ್ದು, ಬಾಲಕಿಯು ಐದು ತಿಂಗಳ ಗರ್ಭಿಣಿಯಾದಾಗ ಮನೆಯವರಿಗೆ ವಿಷಯ ತಿಳಿದಿದೆ. ಘಟನೆಯ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top