(ನ್ಯೂಸ್ ಕಡಬ) newskadaba.com ಬೆಂಗಳೂರು, ನ.16, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಜೆಪಿ ನಗರದಲ್ಲಿರುವ ತನ್ನ ನಿವಾಸಕ್ಕೆ ದೀಪಾವಳಿಯ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಬರೋಬ್ಬರಿ 68 ಸಾವಿರ ರೂ. ದಂಡ ವಿಧಿಸಿದ್ದಾರೆ.
ವಿದ್ಯುತ್ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಕಾಂಗ್ರೆಸ್ ವೀಡಿಯೋ ಮಾಡಿ ಆರೋಪ ಮಾಡಿತ್ತು. ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಮನೆಗೆ ತೆರಳಿ ಪರಿಶೀಲನೆ ಮಾಡಿದ್ದು, ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬೆಸ್ಕಾಂ ಜಾಗೃತಾ ದಳದ ಡಿವೈಎಸ್ಪಿ ಅನುಷಾ ನೇತೃತ್ವದಲ್ಲಿ 10 ನಿಮಿಷಕ್ಕೆ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿದ್ದು, ಅದರಂತೆ ಎರಡು ದಿನ ಎಷ್ಟು ವಿದ್ಯುತ್ ಬಳಕೆ ಆಗಿದೆ ಎಂದು ರಿಪೋರ್ಟ್ ನೀಡಿದ್ದರು. ಇದೀಗ ಬೆಸ್ಕಾಂ ಇಲಾಖೆಯು 68 ಸಾವಿರ ದಂಡವನ್ನು ವಿಧಿಸಿದ್ದು, ಏಳು ದಿನಗಳೊಳಗಾಗಿ ಕಟ್ಟುವಂತೆ ಸೂಚಿಸಿದೆ.
kumaras