ಕಡಬ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೊಲೆರೋ – ಮಗು ಸೇರಿದಂತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ನ.19. ಇಲ್ಲಿನ ಕಡಬ – ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೊಲೇರೋ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್ ಎಂಬವರು ತನ್ನ ಕುಟುಂಬಸ್ಥರೊಂದಿಗೆ ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ವಾಹನ ಅಪಘಾತವಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಮಗು ಸಹಿತ ಮೂರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ವಾಹನ ಜಖಂಗೊಂಡಿದ್ದು ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸ್ಥಳೀಯರು ಕೂಡಲೇ ಆಗಮಿಸಿ ವಾಹನದಲ್ಲಿದ್ದವರನ್ನು ಉಪಚರಿಸಿದ್ದಾರೆ.

Also Read  ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ ➤ ಜಿಲ್ಲಾದ್ಯಂತ ಜೂನ್ 14 ರ ನಂತರ ಒಂದು ವಾರ ಲಾಕ್‍ಡೌನ್

error: Content is protected !!
Scroll to Top