ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರದಂದು ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು.

ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ನೂಜಿ ರೆಂಜಿಲಾಡಿ➤ಶಾಲಾ ಪ್ರಾರಂಭೋತ್ಸವ

error: Content is protected !!
Scroll to Top