(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೀಸ್ ನವೆಂಬರ್ 27ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಪ್ರವಾಸದ ವಿವರ- ನವೆಂಬರ್ 27ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 11.30 – ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆ, ಮಧ್ಯಾಹ್ನ 3.30ರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪರಿಶೀಲನಾ ಸಭೆ, ಸಂಜೆ 4.45ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ, ಅಂದು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು. ನವೆಂಬರ್ 28ರಂದು ಉಡುಪಿಗೆ ತೆರಳಲಿದ್ದಾರೆ ಎಂದು ಅಧ್ಯಕ್ಷರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.