(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತರಬೇತಿ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳಿಗಾಗಿ ಶೇಕಡಾ 10 ರಷ್ಟು ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಸೋಮವಾರದಂದು ಪಡೀಲ್ ನ ಹೊಸ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಭದ್ರತಾ ಕೊಠಡಿಯಿಂದ ಹೊರತೆಗೆಯಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.