ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. 2022ನೇ ಸಾಲಿನ ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿಯಿಂದ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ.


ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು), ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ 7 ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗೆ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗೆ ಪರಿಗಣಿಸಲು ಪ್ರತಿಯೊಂದು ಕೃತಿಯ ನಾಲ್ಕು ಪ್ರತಿಗಳನ್ನು ಹಾಗೂ ಸ್ವ-ವಿವರಗಳನ್ನು ಒಳಗೊಂಡ ಮನವಿಯೊಂದಿಗೆ ಡಿಸೆಂಬರ್ 4 ರೊಳಗೆ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು.  ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://balavikasaacademy.karnataka.gov.in ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ- ಅರ್ಜಿ ಆಹ್ವಾನ

error: Content is protected !!
Scroll to Top