ಮಂಗಳೂರು ವಿಶ್ವವಿದ್ಯಾಲಯ- ಪಿ.ಹೆಚ್.ಡಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಖಾಲಿ ಇರುವ ಪಿ.ಹೆಚ್.ಡಿ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ಪಿ.ಹೆಚ್.ಡಿ ಕಾರ್ಯಕ್ರಮವನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳು ಮತ್ತು ಅರ್ಜಿ ನಮೂನೆಗಾಗಿ  ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ಗೆ ಭೇಟಿ ನೀಡಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು ಅಥವಾ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಡಿಸೆಂಬರ್ 20 ರೊಳಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಬೈಂದೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿ- ಬಾಲಕ ಮೃತ್ಯು ➤ ಪೋಷಕರ ಮೇಲೆ ಕೇಸು ಸಾಧ್ಯತೆ

error: Content is protected !!
Scroll to Top