ಟ್ರಾನ್ಸ್ ಜೆಂಡರ್ಸ್ ಹಾಗೂ ದಮನಿತ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಲಯನ್ಸ್ ಕ್ಲಬ್ ಮಂಗಳೂರು, ಅಶೋಕ ನಗರ ಇವರ ಸಹಯೋಗದಲ್ಲಿ “ಟ್ರಾನ್ಸ್ ಜೆಂಡರ್ಸ್ ಹಾಗೂ ದಮನಿತ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ”ವನ್ನು ನಗರದ ಕದ್ರಿಯ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಉಸ್ಮಾನ್ ಎ. ಉದ್ಘಾಟಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅಶೋಕ ನಗರದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಚರಣ್ ಆಳ್ವ ಎಂ.ಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿಯಾದ ರಶ್ಮಿ ಕೆ.ಎಮ್ ಭಾಗವಹಿಸಿದ್ದರು. ಕಾನೂನು ಅರಿವು ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲೆ ಗೌರಿ ಕೆ.ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಹಿಳಾ ಅಭಿವೃದ್ದಿ ನಿಗಮದ ನಿರೀಕ್ಷಕಿ ಚಂದ್ರಿಕಾ ಎಸ್. ನಾಯಕ್ ಸ್ವಾಗತಿಸಿದರು. ನವಸಹಜ ಸಮುದಾಯ ಸಂಘಟನೆಯ ಅಧ್ಯಕ್ಷರಾದ ನಿಕೀಲಾ ನಿರೂಪಿಸಿದರು, ಹಿರಿಯ ಮೇಲ್ವಿಚಾರಕಿ ರೆಹನಾ ವಂದಿಸಿದರು.

Also Read  ಲೀಚಿ ಹಣ್ಣಿನಲ್ಲಿದೆ ವಿಶೇಷ ಔಷಧೀಯ ಅಂಶ

error: Content is protected !!
Scroll to Top