ಭೂಮಿ ಯೋಜನೆ- ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17,149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.

ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಿದ್ದು, ಇದಕ್ಕೆ ಸಹಕರಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಅಭಿನಂದಿಸಿದ್ದಾರೆ. ಬೆಳ್ತಂಗಡಿ ತಾಲೂಕು ರಾಜ್ಯ ಮಟ್ಟದಲ್ಲಿ ಪ್ರಥಮ ಹಾಗೂ ಬಂಟ್ವಾಳ ತಾಲೂಕು ದ್ವಿತೀಯ ಸ್ಥಾನ ಪಡೆದಿರುತ್ತದೆ. ಅದೇ ರೀತಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕು ಕಂದಾಯ ಇಲಾಖೆಯಲ್ಲಿಯೂ ಉತ್ತಮ ಸಾಧನೆ ಮಾಡಿರುವುದಕ್ಕೆ ಕಂದಾಯ ಆಯುಕ್ತರು ಅಭಿನಂಧಿಸಿದ್ದಾರೆ.

Also Read  ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

error: Content is protected !!
Scroll to Top