(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಲಯನ್ಸ್ ಕ್ಲಬ್ ಮಂಗಳೂರು ಗಾಂಧಿನಗರ ಇವರ ಸಹಯೋಗದಲ್ಲಿ ಡಿಸೆಂಬರ್ 2 ರಂದು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.15ಕ್ಕೆ ವಿಶೇಷ ಶಾಲೆಗಳ ವಿಕಲಚೇತನ ಮಕ್ಕಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಆವರಣದಿಂದ ಪುರಭವನ ಸಭಾಂಗಣದವರೆಗೆ ಸಾಮಾಜಿಕ ಅರಿವಿಗಾಗಿ ಪಥಸಂಚಲನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.