ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ನವೆಂಬರ್ 27ರಂದು ಬೆಳಗ್ಗೆ 11.30 ರಿಂದ 1 ಗಂಟೆಯವರೆಗೆ  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ ನಡೆಸುವರು. ಅಲ್ಪಸಂಖ್ಯಾತ ಸಮುದಾಯದವರು ಈ ಸಭೆಗೆ ಹಾಜರಾಗಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ

error: Content is protected !!
Scroll to Top